Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:19 - ಕನ್ನಡ ಸತ್ಯವೇದವು J.V. (BSI)

19 ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಲೋಕದ ಜನರು ಆರಾಧಿಸಿದ ಮತ್ತು ಕೈಯಾರೆ ಮಾಡಿದ್ದ ದೇವರುಗಳನ್ನು ಜೆರುಸಲೇಮಿನ ದೇವರೊಂದಿಗೆ ಹೋಲಿಸಿ ಆತನ ವಿರುದ್ಧವಾಗಿ ಮಾತಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:19
31 ತಿಳಿವುಗಳ ಹೋಲಿಕೆ  

ಇವರ ದೇಶವು ವಿಗ್ರಹಗಳಿಂದಲೂ ತುಂಬಿದೆ, ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ತಮ್ಮ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿವೆ; ಹೌದು, ಇಸ್ರಾಯೇಲ್ ವಂಶದವರು ತಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಯೆಹೋವನ ನುಡಿ.


ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವು ಊಫಜಿನಿಂದಲೂ ಸಾಗಿಬರುತ್ತವೆ; ನೀಲಧೂಮ್ರವಸ್ತ್ರಗಳು ಅವುಗಳ ಉಡುಪಾಗಿವೆ; ಇವೆಲ್ಲಾ ಕುಶಲರ ಕೌಶಲ್ಯ.


ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಬಾಚಿಯಿಂದ ರೂಪಿಸುವನು.


ನನ್ನ ಜನರು ನನ್ನನ್ನು ಬಿಟ್ಟದ್ದು, ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದ್ದಕ್ಕೆ ಅಡ್ಡಬಿದ್ದದ್ದು, ಈ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.


ಹೀಗಿರಲು ಪರಜನಾಂಗದ ರಾಯಭಾರಿಗಳಿಗೆ ಏನುತ್ತರ ಕೊಡಬೇಕಂದರೆ ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ದೀನದರಿದ್ರರು ಅದನ್ನೇ ಆಶ್ರಯಿಸಿಕೊಳ್ಳುವರು ಎಂಬದೇ.


ಯೆಹೂದಕುಲವನ್ನೂ ತನ್ನ ಪ್ರಿಯ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.


ಆದರೆ ಈಗ ನನ್ನ ನಾಮಸ್ಥಾಪನೆಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ ಕೇಳಲಾರದೆ ತಿನ್ನಲಾರದೆ ವಾಸನೆ ತಿಳುಕೊಳ್ಳಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ಈ ಕಾರಣದಿಂದ ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಲು


ಆಗ ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಯೆಹೋವನು ಹೀಗನ್ನುತ್ತಾನೆ - ಯೆಹೋವನು ತಗ್ಗುಗಳ ದೇವರಲ್ಲ, ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವದು ಎಂದು ಹೇಳಿದನು.


ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿ ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು