2 ಪೂರ್ವಕಾಲ ವೃತ್ತಾಂತ 32:25 - ಕನ್ನಡ ಸತ್ಯವೇದವು J.V. (BSI)25 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದದರಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು. ಅಧ್ಯಾಯವನ್ನು ನೋಡಿ |
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;