Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:27 - ಕನ್ನಡ ಸತ್ಯವೇದವು J.V. (BSI)

27 ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿ ಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧ ಇವುಗಳನ್ನಿಡುವದಕ್ಕೋಸ್ಕರ ಭಂಡಾರಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳನ್ನು ಸಂಗ್ರಹಿಸುವದಕ್ಕೋಸ್ಕರ ಉಗ್ರಾಣಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹಿಜ್ಕೀಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:27
11 ತಿಳಿವುಗಳ ಹೋಲಿಕೆ  

ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ಆದದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದದರಿಂದ ಇವನ ಧನಘನತೆಗಳು ಹೆಚ್ಚಾದವು.


ಅರಸನ ಮುಖಾಂತರವಾಗಿ ಯೆರೂಸಲೇವಿುನಲ್ಲಿ ಬೆಳ್ಳಿಯು ಕಲ್ಲಿನ ಹಾಗೂ ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾದವು.


ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.


ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ ಅವರಿಗೆ ಬೆಳ್ಳಿ ಬಂಗಾರ ಸುಗಂಧದ್ರವ್ಯ ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಹಿಜ್ಕೀಯನು ತನ್ನ ಗರ್ವವನ್ನು ಬಿಟ್ಟು ಯೆರೂಸಲೇವಿುನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಜೀವಮಾನದಲ್ಲಿ ಯೆಹೋವನ ಕೋಪವು ಅವರ ಮೇಲೆ ಬರಲಿಲ್ಲ.


ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ ಆಡುಕುರಿಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.


ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು ನಿನ್ನ ಸರಕುಗಳನ್ನು ಕೊಳ್ಳೆಹೊಡೆದು ನಿನ್ನ ಗೋಡೆಗಳನ್ನು ಉರುಳಿಸಿ ನಿನ್ನ ವಿನೋದಭವನಗಳನ್ನು ಕಿತ್ತುಹಾಕಿ ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.


ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.


ಅವನು ಐಶ್ವರ್ಯ ಮಾನ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು