2 ಪೂರ್ವಕಾಲ ವೃತ್ತಾಂತ 32:31 - ಕನ್ನಡ ಸತ್ಯವೇದವು J.V. (BSI)31 ಆದದರಿಂದ ಅವನ ದೇಶದಲ್ಲುಂಟಾದ ಅದ್ಭುತದ ವಿಷಯವನ್ನು ವಿಚಾರಿಸುವದಕ್ಕಾಗಿ ಬಾಬೆಲಿನ ಪ್ರಭುಗಳ ರಾಯಭಾರಿಗಳು ಅವನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವದಕ್ಕೂ ಅವನ ಸರ್ವಾಂತರ್ಯವನ್ನು ತಿಳುಕೊಳ್ಳುವದಕ್ಕೂ ಅವನನ್ನು ಕೈಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಒಂದು ಸಾರಿ ಬಾಬಿಲೋನಿನವರು ಹಿಜ್ಕೀಯನ ಬಳಿಗೆ ದೂತರನ್ನು ಕಳುಹಿಸಿದರು. ಅವರು ದೇಶದಲ್ಲಿ ಆದ ಅದ್ಭುತ ವಿಷಯದ ಬಗ್ಗೆ ವಿಚಾರಿಸಿದರು. ಅವರು ಹಿಜ್ಕೀಯನ ಬಳಿಗೆ ಬಂದಾಗ ದೇವರು ಅವನನ್ನು ಪರೀಕ್ಷಿಸುವುದಕ್ಕಾಗಿಯೂ ಅವನ ಹೃದಯದಲ್ಲಿದ್ದ ಪ್ರತಿಯೊಂದು ಆಲೋಚನೆಯನ್ನು ತಿಳಿದುಕೊಳ್ಳುವುದಕ್ಕಾಗಿಯೂ ಅವನನ್ನು ತೊರೆದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು. ಅಧ್ಯಾಯವನ್ನು ನೋಡಿ |