Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:4 - ಕನ್ನಡ ಸತ್ಯವೇದವು J.V. (BSI)

4 ಆಗ ಅನೇಕರು ಸೇರಿ - ಇಲ್ಲಿಗೆ ಬರುವ ಅಶ್ಶೂರದ ರಾಜರಿಗೆ ಬೇಕಾದಷ್ಟು ನೀರು ಯಾಕೆ ಸಿಕ್ಕಬೇಕು ಎಂದುಕೊಂಡು ಎಲ್ಲಾ ಬಾವಿಗಳನ್ನೂ ದೇಶಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಸ್ಸೀರಿಯದ ರಾಜನಿಗೆ ಬೇಕಾದಷ್ಟು ನೀರು ಏಕೆ ಸಿಕ್ಕಬೇಕು?,” ಎಂದುಕೊಂಡು ಎಲ್ಲಾ ಬಾವಿಗಳನ್ನೂ ನಾಡಿನ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:4
15 ತಿಳಿವುಗಳ ಹೋಲಿಕೆ  

ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಸಾರ್ಥಕನಾದನು.


ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.


ಈ ಭಕ್ತಿಕಾರ್ಯಗಳಾದನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆಹಾಕಿದನು.


ಅವರು ಯೆರೂಸಲೇವಿುನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್‍ಹಳ್ಳದಲ್ಲಿ ಬೀಸಾಟುಬಿಟ್ಟರು.


ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೆಹೋವನೇ, ಅಶ್ಶೂರದ ಅರಸರು ದೇಶಜನಾಂಗಗಳನ್ನು ಹಾಳುಮಾಡಿ


ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಇಸ್ರಾಯೇಲ್ಯರ ಅರಸನೂ ಏಲನ ಮಗನೂ ಆದ ಹೋಶೇಯನ ಆಳಿಕೆಯ ಏಳನೆಯ ವರುಷದಲ್ಲಿ ಅಂದರೆ ಹಿಜ್ಕೀಯನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು


ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನಿಟ್ಟು ಅವರ ಸಹಾಯವನ್ನು ಪಡಕೊಂಡನು.


ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದಿರಿ; ಆದರೆ ಇದನ್ನೆಲ್ಲಾ ನಡಿಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಬುರುಜುಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಯನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ,


ದಾವೀದನ ಕೋಟೆಯ ಒಡಕುಗಳು ಬಹಳವೆಂದು ನೋಡಿದಿರಿ; ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು