Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:5 - ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಅರಸನು ಧೈರ್ಯಗೊಂಡು ಅಲ್ಲಲ್ಲಿ ಬಿದ್ದುಹೋದ ಪೌಳಿಗೋಡೆಯನ್ನು ಜೀರ್ಣೋದ್ಧಾರಮಾಡಿಸಿ ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿ ದಾವೀದ ನಗರದ ವಿುಲ್ಲೋಕೋಟೆಯನ್ನು ಭದ್ರಪಡಿಸಿ ಅನೇಕಾಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಹಿಜ್ಕೀಯನು ಜೆರುಸಲೇಮಿನ ಬಿದ್ದುಹೋಗಿದ್ದ ಕೋಟೆಗೋಡೆಗಳನ್ನು ಕಟ್ಟಿಸಿ ಭದ್ರಪಡಿಸಿದನು, ಪೌಳಿಗೋಡೆಯ ಮೇಲೆ ಬುರುಜು ಕಟ್ಟಿಸಿದನು. ಅಲ್ಲದೆ ಪೌಳಿಗೋಡೆಯ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿದನು. ಜೆರುಸಲೇಮಿನ ಹಳೇ ಭಾಗದ ಪೂರ್ವದ ಗೋಡೆಯನ್ನು ಭದ್ರಪಡಿಸಿದನು. ಅವನು ಅನೇಕ ಆಯುಧಗಳನ್ನು ಮತ್ತು ಗುರಾಣಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:5
18 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡು ಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಬಿಟ್ಟನು.


ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು;


ಒಂಭತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಬಳಿಯಲ್ಲಿರುವ ಬಾಗಲಿನಿಂದ ಓಡಿಹೋದರು; ಅದು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋಗುತ್ತಿರುವಾಗ


ದಾವೀದನು ಆ ಕೋಟೆಗೆ ದಾವೀದನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ ಅದರ ಸುತ್ತಲೂ ವಿುಲ್ಲೋವಿನಿಂದ ಪ್ರಾರಂಭಿಸಿ ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.


ಯೆಹೂದದ ಅರಸನಾದ ಚಿದ್ಕೀಯನೂ ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನಮಾಡಿದರು.


ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುವವರಾದರು. ಅವನು ಅಧಿಕಬಲವುಳ್ಳವನಾದದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.


ಏಳನೆಯ ವರುಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಡಂಬಡಿಕೆಯನ್ನು ಮಾಡಿಕೊಂಡನು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.


ಅವನು ತಿರುಗಿ ಬಿದ್ದದ್ದು ಹೇಗಂದರೆ - ಸೊಲೊಮೋನನು ವಿುಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲಸ್ಥಳವನ್ನು ಭದ್ರಪಡಿಸುತ್ತಿರುವಾಗ


ತರುವಾಯ ಎಲ್ಲಾ ಶೆಕೆವಿುನವರೂ ವಿುಲ್ಲೋ ಕೋಟೆಯವರೂ ಶೆಕೆವಿುನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಏರ್ಪಡಿಸಿಕೊಂಡರು.


ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.


ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನು ಬಾಗಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದ ನಗರದ ಹೊರಗಣ ಬಲು ಎತ್ತರವಾದ ಗೋಡೆಯನ್ನು ಕಟ್ಟಿಸಿ ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಪತಿಗಳನ್ನಿರಿಸಿದನು.


ಒಂದಕ್ಕೊಂದು ನೂಕಾಡುವದಿಲ್ಲ, ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ, ಸಾಲುಗಳು ಒಡೆದುಹೋಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು