Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:6 - ಕನ್ನಡ ಸತ್ಯವೇದವು J.V. (BSI)

6 ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇವಿುಸಿ ಅವರನ್ನು ಊರುಬಾಗಲಿನ ಬೈಲಿನಲ್ಲಿ ಕೂಡಿಸಿಕೊಂಡು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಿಲಿನ ಬಯಲಿನಲ್ಲಿ ಕೂಡಿಸಿದನು. ಅವರಿಗೆ, “ಶೂರರಾಗಿರಿ, ಧೈರ್ಯದಿಂದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6-7 ಹಿಜ್ಕೀಯನು ಸೈನಿಕರಿಗೆಲ್ಲಾ ದಳಪತಿಗಳನ್ನು ನೇಮಿಸಿದನು. ಜೆರುಸಲೇಮಿನ ನಗರದ ಹೆಬ್ಬಾಗಿಲ ಬಳಿಯಲ್ಲಿದ್ದ ಮೈದಾನದಲ್ಲಿ ಹಿಜ್ಕೀಯನು ಸೇನಾಪತಿಗಳೊಂದಿಗೆ ಸಮಾಲೋಚನೆ ನಡಿಸಿದನು; ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಿದನು. “ಧೈರ್ಯಶಾಲಿಗಳಾಗಿರಿ, ಬಲಗೊಳ್ಳಿರಿ, ಅಶ್ಶೂರದ ಅರಸನಿಗಾಗಲಿ ಅರಸನೊಂದಿಗಿರುವ ಆ ದೊಡ್ಡ ಸೈನ್ಯಕ್ಕಾಗಲಿ ಭಯಪಡಬೇಡಿರಿ. ಅವನಿಗಿಂತಲೂ ಹೆಚ್ಚಾದ ಸಾಮರ್ಥ್ಯ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:6
9 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಯೆಹೋವನ [ಭಜನೆಯಲ್ಲಿ] ಗಟ್ಟಿಗರಾಗಿದ್ದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತಾಡಿದನು. ನೇಮಕವಾದ ಏಳು ದಿವಸಗಳವರೆಗೂ ಜನರು ಸಮಾಧಾನಯಜ್ಞಗಳನ್ನರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣ ಮಾಡಿದರು.


ಯೆರೂಸಲೇವಿುನ ಸಂಗಡ ಹೃದಯಂಗಮವಾಗಿ ಮಾತಾಡಿರಿ; ಅದಕ್ಕೆ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಲು, ಎಫ್ರಾಯೀಮ್ ಬಾಗಲು ಇವುಗಳ ಮುಂದಣ ಬೈಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.


ಆಗ ಮೂರನೆಯ ದಿನದಲ್ಲಿ ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲಾ ಪುರುಷರೂ ಯೆರೂಸಲೇವಿುನಲ್ಲಿ ಬಂದು ಕೂಡಿ ಆ ಸಂಗತಿಯ ನಿವಿುತ್ತವಾಗಿಯೂ ದೊಡ್ಡ ಮಳೆಯ ದೆಸೆಯಿಂದಲೂ ನಡುಗುತ್ತಾ ದೇವಾಲಯದ ಬೈಲಿನಲ್ಲಿ ಕೂತುಕೊಂಡರು.


ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು; ಆ ಹುಡುಗಿಯನ್ನು ಮೋಹಿಸಿ ಆಕೆಯ ಸಂಗಡ ಮನವೊಲಿಸುವ ಮಾತುಗಳನ್ನಾಡಿದನು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು