2 ಪೂರ್ವಕಾಲ ವೃತ್ತಾಂತ 33:13 - ಕನ್ನಡ ಸತ್ಯವೇದವು J.V. (BSI)13 ಆತನು ಲಾಲಿಸಿ ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬದು ಮನಸ್ಸೆಗೆ ಮಂದಟ್ಟಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು. ಅಧ್ಯಾಯವನ್ನು ನೋಡಿ |