Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನ ಯಜ್ಞವೇದಿಯನ್ನು ತಿರಿಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಅರ್ಪಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ, ಕೃತಜ್ಞತಾಯಜ್ಞಗಳನ್ನೂ, ಅರ್ಪಿಸಿ ಇಸ್ರಾಯೇಲಿನ ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನ ಯಜ್ಞವೇದಿಕೆಯನ್ನು ಕಟ್ಟಿಸಿ ಅದರಲ್ಲಿ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದನು. ಯೆಹೂದದಲ್ಲಿದ್ದ ಎಲ್ಲಾ ಜನರೂ ದೇವರಾದ ಯೆಹೋವನ ಸೇವೆಮಾಡುವಂತೆ ಆಜ್ಞೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಯೆಹೋವ ದೇವರ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ಸಮಾಧಾನದ ಬಲಿಗಳನ್ನೂ, ಸ್ತೋತ್ರದ ಬಲಿಗಳನ್ನೂ ಅರ್ಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:16
11 ತಿಳಿವುಗಳ ಹೋಲಿಕೆ  

ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ಆದರೆ ಯೆಹೂದ್ಯರೂ ಯೆರೂಸಲೇವಿುನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲ್ಯರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಆಮೇಲೆ ಅವರು ಅರಮನೆಯೊಳಕ್ಕೆ ಹೋಗಿ ಅರಸನಾದ ಹಿಜ್ಕೀಯನಿಗೆ - ನಾವು ಯೆಹೋವನ ಸಮಸ್ತಾಲಯವನ್ನೂ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಅದರ ಸಾಮಾನುಗಳನ್ನೂ ಶುದ್ಧಮಾಡಿದೆವು.


ನೀವು ನಿಮ್ಮ ಪಿತೃಗಳ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಕೊಳ್ಳಿರಿ ಎಂದು ಆಜ್ಞಾಪಿಸಿದನು.


ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿನ ಯೆಹೋವವೇದಿಯನ್ನು ತಿರಿಗಿ ಕಟ್ಟಿಸಿದನು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಆಮೇಲೆ ಹಿಜ್ಕೀಯನು ಸಮೂಹದವರಿಗೆ - ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರಲ್ಲಾ; ಹತ್ತಿರ ಬಂದು ಯೆಹೋವನ ಆಲಯಕ್ಕೋಸ್ಕರ ಸಮಾಧಾನಯಜ್ಞಗಳನ್ನೂ ಕೃತಜ್ಞತಾ ಯಜ್ಞಗಳನ್ನೂ ಸಮರ್ಪಿಸಿರಿ ಅನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ ಅನೇಕರು ಸ್ವೇಚ್ಫೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡಿಸಿ ಅಶೇರವಿಗ್ರಹಸ್ತಂಭಗಳನ್ನು ಕಡಿಸಿಬಿಟ್ಟು ಯೆಹೂದ್ಯರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು