Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:24 - ಕನ್ನಡ ಸತ್ಯವೇದವು J.V. (BSI)

24 ಅವನ ಸೇವಕರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನ ಸೇವಕರು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಮೋನನ ಸೇವಕರು ಸಂಚುಮಾಡಿ ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:24
10 ತಿಳಿವುಗಳ ಹೋಲಿಕೆ  

ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.


ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರೋಧವಾಗಿ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.


ನರಹತ್ಯವು ಸಹೋದರ ಹತ್ಯವಲ್ಲವೇ. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿಯೇ ಉಂಟುಮಾಡಿದನಾದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾರೋ ಅವರ ರಕ್ತವನ್ನು ಮನುಷ್ಯರೇ ಸುರಿಸುವರು.


ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ವಧಿಸಿ - ಇವನು ಯೆಹೋವನ ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಾಗಿರುತ್ತಾನಲ್ಲವೇ ಅಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು