2 ಪೂರ್ವಕಾಲ ವೃತ್ತಾಂತ 33:3 - ಕನ್ನಡ ಸತ್ಯವೇದವು J.V. (BSI)3 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರಿಗಿ ಸ್ಥಾಪಿಸಿ ಬಾಳ್‍ದೇವತೆಗಳಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿದನು. ಬಾಳ್‍ದೇವತೆಗಳಿಗಾಗಿ ಬಲಿಪೀಠಗಳನ್ನು ಕಟ್ಟಿಸಿದನು; ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು. ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.