Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:6 - ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:6
24 ತಿಳಿವುಗಳ ಹೋಲಿಕೆ  

ಅವನು ಬೆನ್‍ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಆಹುತಿಕೊಟ್ಟನು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬಾರದು. ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.


ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?


ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.


ಕಕ್ಷಭೇದ ಭಿನ್ನಮತ ಮತ್ಸರ ಕುಡಿಕತನ ದುಂದೌತಣ ಇಂಥವುಗಳೇ.


ತಮ್ಮ ಮಕ್ಕಳನ್ನು ಕೊಂದು ತಮ್ಮ ಬೊಂಬೆಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಹೊಲೆಗೈದರು; ಇಗೋ, ನನ್ನ ಮಂದಿರದ ನಟ್ಟನಡುವೆ ಇದನ್ನು ನಡಿಸಿದರು.


ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ, ತಮ್ಮ ಬೊಂಬೆಗಳಿಂದ ವ್ಯಭಿಚಾರಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ಬೊಂಬೆಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ.


ಐಗುಪ್ತದ ಅಂತರಾತ್ಮವು ಬರಿದಾಗುವದು; ಅದರ ಆಲೋಚನೆಯನ್ನು ಭಂಗಪಡಿಸುವೆನು; ಅಲ್ಲಿಯವರು ವಿಗ್ರಹಗಳನ್ನೂ ಮಂತ್ರಗಾರರನ್ನೂ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸುವರು.


ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಯಾರೂ ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೇನ್‍ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಟ್ಟರು; ಯೆಹೋವನ ದೃಷ್ಟಿಯಲ್ಲಿ ಕೆಟ್ಟವುಗಳಾಗಿರುವ ಕಣಿಹೇಳುವದು, ಯಂತ್ರಮಂತ್ರಗಳನ್ನು ಮಾಡುವದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ಮಾರಿಬಿಟ್ಟು ಆತನಿಗೆ ಕೋಪವನ್ನೆಬ್ಬಿಸಿದರು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವದು; ಹಟವು ವಿುಥ್ಯಾಭಕ್ತಿಗೂ ವಿಗ್ರಹಾರಾಧನೆಗೂ ಸಮಾನವಾಗಿರುವದು. ನೀನು ಯೆಹೋವನ ಮಾತನ್ನು ತಳ್ಳಿಬಿಟ್ಟದ್ದರಿಂದ ಆತನು ನಿನ್ನನ್ನು ಅರಸುತನದಿಂದ ತಳ್ಳಿಬಿಟ್ಟಿದ್ದಾನೆ ಎಂದು ನುಡಿದನು.


ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ಸತ್ತವರಲ್ಲಿ ವಿಚಾರಿಸುವವರೂ ಬೇತಾಳಿಕರೂ ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ನೀನು ಇಸ್ರಾಯೇಲ್ಯರಿಗೆ ಹೀಗೆ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಾಗಲಿ ಅವರ ನಡುವೆ ಇಳುಕೊಂಡಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ತಮ್ಮ ಗಂಡು ಹೆಣ್ಣುಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ.


ಇದಲ್ಲದೆ ಅಶೇರವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನನ್ನು ರೇಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು