2 ಪೂರ್ವಕಾಲ ವೃತ್ತಾಂತ 33:7 - ಕನ್ನಡ ಸತ್ಯವೇದವು J.V. (BSI)7 ತಾನು ಮಾಡಿಸಿದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರವಿಧಿ ನ್ಯಾಯಗಳನ್ನು ಅನುಸರಿಸಿ ನಡೆಯುವದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳೊಳಗೆ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಆ ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೊಮೋನನೊಂದಿಗೂ ಮಾತನಾಡಿ, “ನನ್ನ ಹೆಸರನ್ನು ಈ ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಈ ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ಮರಣೆಯು ಸದಾಕಾಲ ನಡಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ. ಅಧ್ಯಾಯವನ್ನು ನೋಡಿ |