Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:9 - ಕನ್ನಡ ಸತ್ಯವೇದವು J.V. (BSI)

9 ಆದರೆ ಯೆಹೂದ್ಯರೂ ಯೆರೂಸಲೇವಿುನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲ್ಯರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:9
18 ತಿಳಿವುಗಳ ಹೋಲಿಕೆ  

ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು.


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ನೀವು ಬಹುಕಾಲದವರೆಗೆ ಅರಣ್ಯದಲ್ಲಿದ್ದನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲಿ ಸಂಹರಿಸಿದೆನು.


ಅವರು ಬಲಿಷ್ಠರೂ ಬಹುಜನವೂ ಅನಾಕ್ಯರಂತೆ ಉನ್ನತರಾದವರೂ ಆಗಿದ್ದರು.


ಈ ದುರಾಚಾರಗಳಲ್ಲಿ ಯಾವದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.


ಇಸ್ರಾಯೇಲ್ಯರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ನೇವಿುಸಲ್ಪಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು ಎಂದು ಹೇಳಿದ್ದನು.


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ಕೈಕೊಳ್ಳದೆ ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸದೆ ಆ ಜನಾಂಗಗಳಿಗಿಂತ ಹೆಚ್ಚು ದೊಂಬಿಮಾಡುವವರಾಗಿರುವದರಿಂದ [ಯೆರೂಸಲೇಮೇ,]


ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್‍ರಾಜನಾದ ಆಹಾಜನ ನಿವಿುತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು