Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:13 - ಕನ್ನಡ ಸತ್ಯವೇದವು J.V. (BSI)

13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡಿಸುತ್ತಿದ್ದರು; ಎಲ್ಲಾ ಲೇಖಕರೂ ಅಧಿಕಾರಿಗಳೂ ದ್ವಾರಪಾಲಕರೂ ಲೇವಿಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನೋಡಿಕೊಳ್ಳುತ್ತಿದ್ದರು; ಎಲ್ಲ ಲೇಖಕರು, ಅಧಿಕಾರಿಗಳು ಹಾಗು ದ್ವಾರಪಾಲಕರು ಲೇವಿಯರೇ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:13
17 ತಿಳಿವುಗಳ ಹೋಲಿಕೆ  

ಇತ್ತ ಯೆಹೂದ್ಯರು - ಹೊರೆಹೊರುವವರ ಬಲವು ಕುಂದಿ ಹೋಯಿತು, ಧೂಳಿನರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವದು ನಮ್ಮಿಂದಾಗದು ಅಂದರು.


ಅವರಲ್ಲಿ ಹೊರೆಹೊರುವದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ ಕಲ್ಲುಗಣಿಗಳಲ್ಲಿ ಕೆಲಸಮಾಡುವದಕ್ಕಾಗಿ ಎಂಭತ್ತು ಸಾವಿರ ಮಂದಿಯನ್ನೂ ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇವಿುಸಿದನು.


ಆ ಕಾಲದಲ್ಲಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಕಾಯಫನೆಂಬ ಮಹಾಯಾಜಕನ ಮಠಕ್ಕೆ ಕೂಡಿಬಂದು


ಹೀಗಿರಲು ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ ಎಂದು ನೀವು ಅಂದುಕೊಳ್ಳುವದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳನ್ನಾಗಿ ಮಾಡಿದೆ.


ಇಗೋ, ಯೆಹೋವನ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯಕಾರ್ಯ ಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದಕುಲಪ್ರಭುವೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನ ಲೇಖಕರು; ಧೈರ್ಯದಿಂದ ಕೆಲಸಮಾಡಿರಿ, ಯೆಹೋವನು ಸಜ್ಜನರ ಸಹಾಯಕನು ಎಂದು ಹೇಳಿದನು.


ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.


ಈ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸನಾದ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.


ಮರಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ ಗೋದಿ, ಇಪ್ಪತ್ತು ಸಾವಿರ ಕೋರ್ ಜವೆಗೋದಿ, ಇಪ್ಪತ್ತು ಸಾವಿರ ಬತ್ ದ್ರಾಕ್ಷಾರಸ, ಇಪ್ಪತ್ತು ಸಾವಿರ ಬತ್ ಎಣ್ಣೆ ಇವುಗಳನ್ನು ಕೊಡುವೆನೆಂದು ಹೇಳಿಸಿದನು.


ಹೇಮಾನ್‍ಯೆದುತೂನರ ಹತ್ತಿರ ವಾದ್ಯಗಾರರಿಗೋಸ್ಕರ ತುತೂರಿ ತಾಳ ಮೊದಲಾದ ದೇವಕೀರ್ತನಾಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳೂ ದ್ವಾರಪಾಲಕರಾಗಿ ನೇವಿುಸಲ್ಪಟ್ಟರು.


ಬಾಗಲುಕಾಯುವದಕ್ಕೋಸ್ಕರ ಯೆದುತೂನನ ಮಗನಾದ ಓಬೇದೆದೋಮ್ ಹೋಸ ಇವರನ್ನೂ ಇವರ ಅರುವತ್ತೆಂಟು ಮಂದಿ ಸಹೋದರರನ್ನೂ ಅಲ್ಲೇ ಇರಿಸಿದನು.


ತಮ್ಮ ಸಹೋದರರೊಳಗೆ ಎರಡನೆಯ ತರಗತಿಯವರಾದ ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ವಿುಕ್ನೇಯ, ದ್ವಾರಪಾಲಕರಾದ ಓಬೇದೆದೋಮ್ ಯೆಗೀಯೇಲರು ಇವರನ್ನು ನೇವಿುಸಿದರು.


ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಇವರೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.


ಅಲ್ಲಿಂದ ಹೊರಟು ಊರುಬಾಗಲಿಗೆ ಬಂದು ಕಾಯುವವರಿಗೆ - ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯ ಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳು ಅಲ್ಲಲ್ಲಿ ಕಟ್ಟಲ್ಪಟ್ಟಿರುತ್ತವೆ, ಡೇರೆಗಳು ಇದ್ದ ಹಾಗೆಯೇ ಇರುತ್ತವೆ ಎಂದು ಕೂಗಿ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು