Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶದ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರ ಕೊಡಲಾಗಿದ್ದ ಸರ್ವೇಶ್ವರನ ಧರ್ಮೋಪದೇಶದ ಗ್ರಂಥವು ಯಾಜಕ ಹಿಲ್ಕೀಯನಿಗೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವಾಲಯದೊಳಗೆ ಶೇಖರಿಸಿಟ್ಟಿದ್ದ ಹಣವನ್ನು ಲೇವಿಯರು ತಂದುಕೊಟ್ಟರು. ಅದೇ ಸಮಯದಲ್ಲಿ ಮಹಾಯಾಜಕನಾದ ಹಿಲ್ಕೀಯನು ಮೋಶೆಯ ಧರ್ಮಶಾಸ್ತ್ರದ ಪ್ರತಿಯೊಂದನ್ನು ದೇವಾಲಯದಲ್ಲಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತೆಗೆದುಕೊಂಡು ಬರುವಾಗ, ಯಾಜಕನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಯೆಹೋವ ದೇವರ ನಿಯಮದ ಗ್ರಂಥವನ್ನು ಕಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:14
19 ತಿಳಿವುಗಳ ಹೋಲಿಕೆ  

ಇತ್ತಲಾಗಿ ಅವರು ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.


ಹೀಗಿರಲು ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ ಎಂದು ನೀವು ಅಂದುಕೊಳ್ಳುವದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳನ್ನಾಗಿ ಮಾಡಿದೆ.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ;


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದ ಪಡುವವನಾಗಿ ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವನೋ ಅವನು ಎಷ್ಟೋ ಧನ್ಯನು.


ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.


ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರಾನುಸಾರವಾದ ಅವನ ಭಕ್ತಿಕಾರ್ಯಗಳೂ


ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇವಿುನವರಿಂಲೂ ಕೂಡಿಸಿದ್ದ ಹಣವನ್ನು


ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇವಿುನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ಯರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಮೇಲೆ ಕಂಡವುಗಳೇ.


ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು.


ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದ್ದನ್ನೆಲ್ಲಾ ಆರೋನನೂ ಅವನ ಮಕ್ಕಳೂ ಮಾಡಿದರು.


ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಬಂದರು.


ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು