Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:15 - ಕನ್ನಡ ಸತ್ಯವೇದವು J.V. (BSI)

15 ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿದೆ,” ಎಂದು ಹೇಳಿ ಅದನ್ನು ಅವನ ಕೈಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಯೆಹೋವನ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿ ಅದನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:15
8 ತಿಳಿವುಗಳ ಹೋಲಿಕೆ  

ಮಹಾಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.


ಯೆಹೋವನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಧರ್ಮೋಪದೇಶದ ಗ್ರಂಥವು ಯಾಜಕನಾದ ಹಿಲ್ಕೀಯನಿಗೆ ಸಿಕ್ಕಿತು.


ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ - ನೀನು ಆಜ್ಞಾಪಿಸಿದ್ದೆಲ್ಲವನ್ನೂ ನಿನ್ನ ಸೇವಕರು ಮಾಡುತ್ತಿದ್ದಾರೆ.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಲಿನ ಮುಂದಿನ ಬೈಲಿನಲ್ಲಿ ಒಟ್ಟಾಗಿ ಕೂಡಿಬಂದು - ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲ್ಯರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕು ಎಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.


ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಲೇವಿಯರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ


ಇದಾದ ಮೇಲೆ ಪಾರಸಿಯ ರಾಜನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬೆಲಿನಿಂದ ಬಂದನು. ಇವನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು;


ಅವನು ಯೆಹೂದ್ಯರ ಎಲ್ಲಾ ಮಹಾಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ - ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ ಎಂದು ಅವರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು