2 ಪೂರ್ವಕಾಲ ವೃತ್ತಾಂತ 34:4 - ಕನ್ನಡ ಸತ್ಯವೇದವು J.V. (BSI)4 ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇದಲ್ಲದೆ ಅವನು ಬಾಳ್ ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಕೆಡವಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ, ಕೆತ್ತಿಸಿದ ಅಶೇರ ಸ್ತಂಭ ಮತ್ತು ಎರಕದ ವಿಗ್ರಹಗಳನ್ನು ಒಡೆದುಹಾಕಿಸಿ ಪುಡಿಪುಡಿ ಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಜನರು ಬಾಳ್ ದೇವರ ವಿಗ್ರಹಗಳನ್ನೂ ಯಜ್ಞವೇದಿಕೆಗಳನ್ನೂ ಯೋಷೀಯನ ಮುಂದೆಯೇ ಕೆಡವಿಹಾಕಿದರು. ಆಮೇಲೆ ಯೋಷೀಯನು ಉನ್ನತಸ್ಥಳದಲ್ಲಿದ್ದ ಧೂಪವೇದಿಕೆಯನ್ನು ಕೆಡವಿ ಹಾಕಿ, ವಿಗ್ರಹಗಳನ್ನೆಲ್ಲಾ ಒಡೆದು ಪುಡಿಮಾಡಿ ಬಾಳ್ ದೇವರ ಪೂಜಾರಿಗಳ ಸಮಾಧಿಯ ಮೇಲೆ ಚೆಲ್ಲಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ, ಅಧ್ಯಾಯವನ್ನು ನೋಡಿ |
ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.