ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
ಮತ್ತು ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು ಒಡೆದು ಅರೆದು ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆನು.
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
ಅದರ ಎರಕದ ಬೊಂಬೆಗಳೆಲ್ಲಾ ಒಡೆಯಲ್ಪಡುವವು; ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವದು, ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು; ಅದು ಸೂಳೆತನದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು, ಸೂಳೆತನದ ಸಂಪಾದನೆಯಾಗಿಯೇ ಪರರಪಾಲಾಗುವವು.