Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:8 - ಕನ್ನಡ ಸತ್ಯವೇದವು J.V. (BSI)

8 ಅವನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ದೇಶವನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವದಕ್ಕೋಸ್ಕರ ಅಚಲ್ಯನ ಮಗನಾದ ಶಾಫಾನನನ್ನೂ ಪುರಾಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಾಡನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕಾಗಿ ಅಚಲ್ಯನ ಮಗ ಶಾಫಾನನನ್ನು ಪುರಾಧಿಕಾರಿಯಾದ ಮಾಸೇಯನನ್ನು ಮತ್ತು ಮುಖ್ಯಮಂತ್ರಿಯಾಗಿದ್ದ ಯೋವಾಹಾಜನ ಮಗ ಯೋವಾಹನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೋಷೀಯನು ಶಾಫಾನ್, ಮಾಸೇಯ ಮತ್ತು ಯೋವಾಹ ಇವರನ್ನು ತನ್ನ ದೇವರಾದ ಯೆಹೋವನ ಆಲಯವನ್ನು ಸರಿಪಡಿಸಲು ಕಳುಹಿಸಿದನು. ಶಾಫಾನನ ತಂದೆಯ ಹೆಸರು ಅಚಲ್ಯ. ಮಾಸೇಯನು ನಗರದ ನಾಯಕನಾಗಿದ್ದನು. ಯೋವಾಹನ ತಂದೆಯ ಹೆಸರು ಯೆಹೋವಾಹಾಜ್. ಯೋವಾಹನು ರಾಜಲೇಖಕನೂ ಆಗಿದ್ದನು. ಯೆಹೂದವನ್ನು ಮತ್ತು ದೇವಾಲಯವನ್ನು ಶುಚಿಮಾಡುವ ಉದ್ದೇಶದಿಂದ ಯೋಷೀಯನು ದೇವಾಲಯದ ದುರಸ್ತಿಕಾರ್ಯಕ್ಕೆ ಕೈ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:8
18 ತಿಳಿವುಗಳ ಹೋಲಿಕೆ  

ಚೆರೂಯಳ ಮಗನಾದ ಯೋವಾಬನು ಅವನ ಸೇನಾಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.


ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ ಮೋವಾಬ್ ಎದೋಮ್ ಮೊದಲಾದ ದೇಶಗಳಲ್ಲಿಯೂ ಚದರಿಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇವಿುಸಿದ್ದಾನೆಂಬ ವರ್ತಮಾನವನ್ನು ಕೇಳಿ


ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರತರಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು [ಎಂದಿನಂತೆ] ಜನರ ಮಧ್ಯೆ ವಾಸಿಸಿದನು.


ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಯೆರೂಸಲೇವಿುನಲ್ಲಿರುವ ಎಲ್ಲಾ ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನ ಮೇಲೆ ಕಳುಹಿಸಿದ ಕಾಗದದಲ್ಲಿ -


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ - ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು;


ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬೆಲಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ, ಇವರ ಕೈಯಲ್ಲಿ ಯೆರೂಸಲೇವಿುನಿಂದ ಬರೆದು ರವಾನಿಸಿದ ಕಾಗದದ ಮಾತೇನಂದರೆ -


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಯಾಜಕ ಮಾಸೇಯನ ಮಗನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ -


ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ -


ಚೆರೂಯಳ ಮಗನಾದ ಯೋವಾಬನು ಅವನ ಸೇನಾಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.


ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಪ್ರಧಾನಮಂತ್ರಿಯು.


ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.


ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ - ನೀವು ಯೆಹೂದದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಯೆಹೋವನ ಆಲಯವನ್ನು ವರುಷ ವರುಷ ಜೀರ್ಣೋದ್ಧಾರ ಮಾಡುವದಕ್ಕಾಗಿ ಎಲ್ಲಾ ಇಸ್ರಾಯೇಲ್ಯರಿಂದ ಹಣಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ ಎಂದು ಆಜ್ಞಾಪಿಸಿದನು.


ಅರಸನೂ ಯೆಹೋಯಾದನೂ ಅದನ್ನು ಯೆಹೋವನ ಆಲಯದ ಕೆಲಸವನ್ನು ನಡಿಸುವವರಿಗೆ ಒಪ್ಪಿಸಿದರು. ಇವರು ಯೆಹೋವನ ಆಲಯದ ಜೀರ್ಣೋದ್ಧಾರಕ್ಕಾಗಿ ಶಿಲ್ಪಿಗರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು