Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:23 - ಕನ್ನಡ ಸತ್ಯವೇದವು J.V. (BSI)

23 ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ - ನನಗೆ ದೊಡ್ಡ ಗಾಯವಾಯಿತು. ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಲ್ಲಿ ಬಿಲ್ಲುಗಾರರು ಅರಸನಾದ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, “ನನಗೆ ದೊಡ್ಡ ಗಾಯವಾಯಿತು, ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಲ್ಲಿ ಬಿಲ್ಲುಗಾರರು ಅರಸ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, “ನನಗೆ ದೊಡ್ಡ ಗಾಯವಾಯಿತು. ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ರಣರಂಗದಲ್ಲಿ ಅರಸನಾದ ಯೋಷೀಯನಿಗೆ ಬಾಣಗಳು ತಾಗಿದ್ದವು. ಆಗ ತನ್ನ ಸೇವಕರಿಗೆ, “ನನ್ನನ್ನು ಇಲ್ಲಿಂದ ಕೊಂಡೊಯ್ಯಿರಿ. ನಾನು ತೀವ್ರವಾಗಿ ಗಾಯಗೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಬಿಲ್ಲುಗಾರರು ಅರಸನಾದ ಯೋಷೀಯನ ಮೇಲೆ ಬಾಣವನ್ನು ಎಸೆದರು. ಅರಸನು ತನ್ನ ಸೇವಕರಿಗೆ, “ನನ್ನನ್ನು ಆಚೆಗೆ ಒಯ್ಯಿರಿ, ಏಕೆಂದರೆ ಬಹು ಗಾಯಪಟ್ಟಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:23
8 ತಿಳಿವುಗಳ ಹೋಲಿಕೆ  

ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು.


ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ.


ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿನಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ - ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ ಎಂದು ಹೇಳಿದನು.


ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿಕೊಂಡು ರಥದಲ್ಲಿ ಬಿದ್ದನು.


ಅರಾಮ್ಯರು ಯೋರಾಮನನ್ನು ಗಾಯಪಡಿಸಲು ಅವನು ಯುದ್ಧದಲ್ಲಾದ ಗಾಯಗಳನ್ನು ಮಾಯಿಸಿಕೊಳ್ಳುವದಕ್ಕಾಗಿ ಇಜ್ರೇಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವದಕ್ಕೋಸ್ಕರ ಅಲ್ಲಿಗೆ ಹೋದನು.


ಬಿಲ್ಲುಗಾರರು ಬಂದು ಅವನನ್ನು ಕೆಣಕಿ ಬಾಣ ಎಸೆದು ಕವಿದುಕೊಂಡರು.


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ ವೇಷಹಾಕಿಕೊಂಡು ಅವನೊಡನೆ ಕಾದುವದಕ್ಕೆ ಮೆಗಿದ್ದೋ ಬೈಲಿಗೆ ಹೋದನು.


ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇವಿುಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಶ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು