2 ಪೂರ್ವಕಾಲ ವೃತ್ತಾಂತ 35:24 - ಕನ್ನಡ ಸತ್ಯವೇದವು J.V. (BSI)24 ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇವಿುಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಶ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೋಷೀಯನ ವಿಷಯವಾಗಿ ಗೋಳಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ, ಜೆರುಸಲೇಮಿಗೆ ತೆಗೆದುಕೊಂಡು ಹೋದರು. ಅಲ್ಲಿ ಅವನು ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಎಲ್ಲ ಯೆಹೂದ್ಯರೂ ಜೆರುಸಲೇಮಿನವರೂ ಯೋಷೀಯನ ಮರಣಕ್ಕಾಗಿ ಶೋಕಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ಸೇವಕರು ಯೋಷೀಯನನ್ನು ಅವನಿದ್ದ ರಥದಿಂದ ತೆಗೆದು ಅವನ ಜೊತೆಯಲ್ಲಿ ತಂದಿದ್ದ ಇನ್ನೊಂದು ರಥದಲ್ಲಿ ಹಾಕಿ ರಣರಂಗದಿಂದ ನೇರವಾಗಿ ಜೆರುಸಲೇಮಿಗೆ ಕೊಂಡೊಯ್ದರು. ಅಲ್ಲಿ ಅವನು ಸತ್ತನು. ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅವನು ಸತ್ತದ್ದನ್ನು ಕೇಳಿ ಯೆಹೂದದ ಮತ್ತು ಜೆರುಸಲೇಮಿನ ಜನರು ತುಂಬಾ ಶೋಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು. ಅಧ್ಯಾಯವನ್ನು ನೋಡಿ |