2 ಪೂರ್ವಕಾಲ ವೃತ್ತಾಂತ 35:25 - ಕನ್ನಡ ಸತ್ಯವೇದವು J.V. (BSI)25 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತಗಳನ್ನು ಹಾಡುವದು ಇಸ್ರಾಯೇಲ್ಯರಲ್ಲಿ ಒಂದು ಪದ್ಧತಿಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು ಮರಣದ ಹಾಡಿನ ಪುಸ್ತಕದಲ್ಲಿ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |