Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:27 - ಕನ್ನಡ ಸತ್ಯವೇದವು J.V. (BSI)

27 ಅವನ ಪೂರ್ವೋತ್ತರವೃತ್ತಾಂತವೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನ ಪೂರ್ವೋತ್ತರ ವೃತ್ತಾಂತವೂ ಇಸ್ರಾಯೇಲರ ಮತ್ತು ಯೆಹೂದ್ಯ ರಾಜರ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನ ಪೂರ್ವೋತ್ತರ ವೃತ್ತಾಂತ ಇವು, ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ದಾಖಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನ ಕ್ರಿಯೆಗಳೂ, ಮೊದಲನೆಯವುಗಳೂ, ಕಡೆಯವುಗಳೂ ಇಸ್ರಾಯೇಲ್ ಯೆಹೂದದ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:27
13 ತಿಳಿವುಗಳ ಹೋಲಿಕೆ  

ಅವನ ದೇವಪ್ರಾರ್ಥನೆಯೂ ಅವನಿಗೆ ದೊರಕಿದ ಸದುತ್ತರವೂ ಅವನು ತನ್ನನ್ನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಮಾಡಿದ ಅಪರಾಧದ್ರೋಹಗಳೂ ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಅಶೇರಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಿಗಳ ಚರಿತ್ರೆಯಲ್ಲಿ ಬರೆದಿರುತ್ತವೆ.


ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗನಾದ ಯೆಶಾಯನ ದರ್ಶನಗ್ರಂಥದಲ್ಲಿಯೂ ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜಗ್ರಂಥದಲ್ಲಿಯೂ ಬರೆದಿರುತ್ತವೆ.


ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದಿದ್ದಾನೆ.


ಅವನ ಉಳಿದ ಪೂರ್ವೋತ್ತರಚರಿತ್ರೆಯು ಯೆಹೂದ್ಯರ ಮತ್ತು ಇಸ್ರಾಯೇಲ್ಯರ ರಾಜರ ಗ್ರಂಥದಲ್ಲಿ ಬರೆದಿರುತ್ತದೆ.


ಅವನ ಮಕ್ಕಳ ವಿವರವೂ ಅವನಿಗೆ ವಿರುದ್ಧವಾಗಿ ಹೇಳಲ್ಪಟ್ಟ ಅನೇಕ ದೈವೋಕ್ತಿಗಳೂ ದೇವಾಲಯದ ಜೀರ್ಣೋದ್ಧಾರವೃತ್ತಾಂತವೂ ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಅಮಚ್ಯನು ಅರಸನಾದನು.


ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆದಿರುತ್ತದೆ.


ಆಮೋನನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಆಹಾಜನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೇಹುವಿನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲ್‍ರಾಜಕಾಲ ವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರಾನುಸಾರವಾದ ಅವನ ಭಕ್ತಿಕಾರ್ಯಗಳೂ


ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಅವನ ತಂದೆಗೆ ಬದಲಾಗಿ ಯೆರೂಸಲೇವಿುನಲ್ಲಿ ಅರಸನನ್ನಾಗಿ ಮಾಡಿದರು.


ರೆಹಬ್ಬಾಮನ ಪೂರ್ವೋತ್ತರಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಿಯಾದ ಇದ್ದೋ ಎಂಬವರ ಚರಿತ್ರೆಗಳ ವಂಶಾವಳಿಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು