Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:7 - ಕನ್ನಡ ಸತ್ಯವೇದವು J.V. (BSI)

7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕ ಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ, ಕುರಿಮರಿಗಳನ್ನೂ, ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೋಷೀಯನು, ಹಬ್ಬಕ್ಕೆ ಬಂದ ಜನರಿಗೆ ಪಾಸ್ಕ ಬಲಿಗಾಗಿ ಆಸ್ಥಾನದ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ಕಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಈ ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:7
10 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಆಲಯವನ್ನು ಪ್ರತಿಷ್ಠಿಸಿದರು.


ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ಗೊತ್ತುಮಾಡಿಕೊಂಡು ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ಇದಲ್ಲದೆ ಅವನು ಯೆಹೋವನ ಧರ್ಮಶಾಸ್ತ್ರವಿಧಿಗನುಸಾರವಾಗಿ ಪ್ರಾತಃಕಾಲ ಸಾಯಂಕಾಲ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗೋಸ್ಕರ ಆಗಬೇಕಾದದ್ದೆಲ್ಲಾ ತನ್ನ ಆಸ್ತಿಯಿಂದ ಸಲ್ಲಿಸಬೇಕೆಂತಲೂ


ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೋಸ್ಕರ ನನ್ನ ಸ್ವಂತ ಸೊತ್ತಿನಿಂದ


ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಮಾಡಿರಿ ಎಂದು ಆಜ್ಞಾಪಿಸಿದನು.


ಅವನ ಸರದಾರರು ಜನರಿಗೂ ಯಾಜಕರಿಗೂ ಲೇವಿಯರಿಗೂ [ಯಜ್ಞಪಶುಗಳನ್ನು] ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.


ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇವಿುಗೆ ಬಂದು ಸೇರುವ ಹಿಂಡಿನ ಹಾಗೆ ಮನುಷ್ಯರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು