Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 35:8 - ಕನ್ನಡ ಸತ್ಯವೇದವು J.V. (BSI)

8 ಅವನ ಸರದಾರರು ಜನರಿಗೂ ಯಾಜಕರಿಗೂ ಲೇವಿಯರಿಗೂ [ಯಜ್ಞಪಶುಗಳನ್ನು] ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನ ಪದಾಧಿಕಾರಿಗಳು ಕೂಡ ಜನರಿಗೂ ಯಾಜಕರಿಗೂ ಲೇವಿಯರಿಗೂ ಬಲಿಪಶುಗಳನ್ನು ಸಂತೋಷವಾಗಿ ದಾನಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವರು ಯಾಜಕರಿಗೆ ಎರಡು ಸಾವಿರದ ಆರುನೂರು ಪಾಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಕೀಯ, ಜೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ತರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಗಳಿಗಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಾಗೆಯೇ ಅವನ ಪ್ರಧಾನರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ, ಜೆಕರ್ಯನೂ, ಯೆಹೀಯೇಲನೂ ಪಸ್ಕದ ಬಲಿಗೋಸ್ಕರ ಎರಡು ಸಾವಿರದ ಆರುನೂರು ಪಸ್ಕದ ಬಲಿಗಳನ್ನೂ, ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 35:8
24 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.


ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಾ


ತೂರ್ ಸಂಸ್ಥಾನದವರು ಕಾಣಿಕೆಗಳಿಂದ ನಿನ್ನನ್ನು ಸನ್ಮಾನಿಸುವರು; ಪ್ರಜೆಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.


ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, [ಇಸ್ರಾಯೇಲ್] ಸಾಧಾರಣಜನರೂ ಯಾಜಕರೂ ಯೆರೂಸಲೇವಿುನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವೇಚ್ಫೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು; ಯೆಹೋವನು ಇವನ ಸಂಗಡ ಇದ್ದನು.


ಇಸ್ರಾಯೇಲ್ಯರ ಪ್ರಧಾನಪುರುಷರು ಅಂದರೆ ಗೋತ್ರಪ್ರಮುಖರಾಗಿದ್ದು ಕುಲಾಧಿಪತಿಗಳಾಗಿಯೂ ಲೆಕ್ಕಿಸಲ್ಪಟ್ಟ ಭಟರ ಮೇಲೆ ನಾಯಕರಾಗಿಯೂ ಇದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.


ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ಗೊತ್ತುಮಾಡಿಕೊಂಡು ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಿಂದ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರು.


ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇವಿುನವರಿಂಲೂ ಕೂಡಿಸಿದ್ದ ಹಣವನ್ನು


ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕ ಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು