Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:1 - ಕನ್ನಡ ಸತ್ಯವೇದವು J.V. (BSI)

1 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಅವನ ತಂದೆಗೆ ಬದಲಾಗಿ ಯೆರೂಸಲೇವಿುನಲ್ಲಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾಡಿನ ಜನರು ಯೋಷೀಯನ ಮಗ ಯೆಹೋವಾಹಾಜನನ್ನು ಅವನ ತಂದೆಗೆ ಬದಲಾಗಿ, ಜೆರುಸಲೇಮಿನಲ್ಲಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದದ ಜನರು ಯೆಹೋವಾಹಾಜನನ್ನು ತಮ್ಮ ಹೊಸ ಅರಸನನ್ನಾಗಿ ಜೆರುಸಲೇಮಿನಲ್ಲಿ ಆರಿಸಿದರು. ಯೆಹೋವಾಹಾಜನು ಯೋಷೀಯನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:1
10 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಯೋಷೀಯನ ಮಗನೂ ತನ್ನ ತಂದೆಯಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವದೇನಂದರೆ - ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು;


ಆದರೆ ದೇಶದ ಜನರು ಅರಸನಾದ ಆಮೋನನಿಗೆ ವಿರೋಧವಾಗಿ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ಅನಂತರ ಎಲ್ಲಾ ಯೆಹೂದ್ಯರೂ ಕೂಡಿ ಹದಿನಾರು ವರುಷದವನಾಗಿದ್ದ ಉಜ್ಜೀಯನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಯೋಷೀಯನ ಮಕ್ಕಳು - ಚೊಚ್ಚಲನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ್; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಅವನ ಪೂರ್ವೋತ್ತರವೃತ್ತಾಂತವೂ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ.


ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತಮೂರು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂರು ತಿಂಗಳು ಆಳಿದನು.


ಅವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದನು; ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರುಷಗಳಾದನಂತರ ಅವನಿಗೆ ವಿರೋಧವಾಗಿ ತಿರುಗಿಬಿದ್ದನು.


ಅದು ಬೆಳೆಯಿಸಿದ ಒಂದು ಮರಿಯು ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು ಮನುಷ್ಯರನ್ನು ನುಂಗಲಾರಂಭಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು