Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:11 - ಕನ್ನಡ ಸತ್ಯವೇದವು J.V. (BSI)

11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಕಾಲ ರಾಜ್ಯಭಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:11
9 ತಿಳಿವುಗಳ ಹೋಲಿಕೆ  

ಅದೇ ವರುಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರುಷದ ಐದನೆಯ ತಿಂಗಳಲ್ಲಿ ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು -


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು -


ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಯೆರೂಸಲೇವಿುನವರು ಸೆರೆಹೋಗುವ ತನಕ ಯೆಹೋವನ ವಾಕ್ಯವು ಒದಗುತ್ತಿತ್ತು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು - ಯೆಹೋವನ ಮಾತನ್ನು ಆಲಿಸು - ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು;


ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವಸೈನ್ಯಸಹಿತನಾಗಿ ಯೆರೂಸಲೇವಿುಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿ


ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ -


ಅವನಾಗಲಿ ಅವನ ಸೇವಕರಾಗಲಿ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು