2 ಪೂರ್ವಕಾಲ ವೃತ್ತಾಂತ 36:14 - ಕನ್ನಡ ಸತ್ಯವೇದವು J.V. (BSI)14 ಪ್ರಧಾನಯಾಜಕರೂ ಪ್ರಜೆಗಳೂ ಕೂಡಾ ಮಹಾದ್ರೋಹಿಗಳಾಗಿ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇವಿುನ ದೇವಾಲಯವನ್ನು ಹೊಲೆಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವನು ಮಾತ್ರವಲ್ಲದೆ ಎಲ್ಲಾ ಯಾಜಕರು, ಯೆಹೂದದ ಜನನಾಯಕರು ಬಹಳ ಪಾಪಗಳನ್ನು ಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟುಹೋಗಿದ್ದರು. ಅವರು ಬೇರೆ ದೇಶಗಳ ನಡವಳಿಕೆಯನ್ನು ಅನುಸರಿಸಿದರು. ಆ ನಾಯಕರುಗಳು ದೇವಾಲಯವನ್ನು ಹಾಳುಮಾಡಿದರು. ಜೆರುಸಲೇಮಿನಲ್ಲಿದ್ದ ಆ ಆಲಯವನ್ನು ಯೆಹೋವನು ತನಗಾಗಿ ಪ್ರತಿಷ್ಠಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅಧ್ಯಾಯವನ್ನು ನೋಡಿ |