Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:15 - ಕನ್ನಡ ಸತ್ಯವೇದವು J.V. (BSI)

15 ಅವರ ಪಿತೃಗಳ ದೇವರಾದ ಯೆಹೋವನು ತನ್ನ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ ಸಾವಕಾಶಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಇದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರ ಪೂರ್ವಿಕರ ದೇವರಾದ ಯೆಹೋವನು ಆಗಾಗ್ಗೆ ತನ್ನ ಪ್ರವಾದಿಗಳನ್ನು ಕಳುಹಿಸಿ ತನ್ನ ಜನರನ್ನು ಎಚ್ಚರಿಸಿದನು. ಯಾಕೆಂದರೆ ಆತನಿಗೆ ತನ್ನ ಜನರೂ ತನ್ನ ಮಂದಿರವೂ ನಾಶವಾಗುವದರಲ್ಲಿ ಇಷ್ಟವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸೇವಕರನ್ನು ಅವನ ಬಳಿಗೆ ಪುನಃ ಕಳುಹಿಸಿದರು. ತಮ್ಮ ಜನರ ಮೇಲೆಯೂ, ತಮ್ಮ ನಿವಾಸ ಸ್ಥಾನದ ಮೇಲೆಯೂ ಅವರು ಕನಿಕರಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:15
26 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ ನಿಮ್ಮನ್ನು ಕರೆದ ನನಗೆ ಉತ್ತರಕೊಡದೆ


ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -


ನಿಮ್ಮ ಪಿತೃಗಳು ಐಗುಪ್ತದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ಸಾವಕಾಶ ಮಾಡದೆ ಕಳುಹಿಸಿದ್ದೇನೆ.


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್ ಇಸಾಕ್ ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಸಿ ಅವರಿಗೆ ದಯೆತೋರಿಸಿದನು; ಕರುಳು ಮರುಗಿದವನಾಗಿ ಅವರಿಗೆ ಪ್ರಸನ್ನನಾದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಪ್ರಧಾನಯಾಜಕರೂ ಪ್ರಜೆಗಳೂ ಕೂಡಾ ಮಹಾದ್ರೋಹಿಗಳಾಗಿ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇವಿುನ ದೇವಾಲಯವನ್ನು ಹೊಲೆಮಾಡಿದರು.


ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.


ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ [ಪ್ರಕಟಿಸುತ್ತಾನಲ್ಲಾ ಇತ್ಯಾದಿ].


ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.


ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.


ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.


ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ -


ಯೆಹೋಯಾಕೀಮನ ಮಗನು ಯೆಕೊನ್ಯ; ಇವನ ಮಗನು ಚಿದ್ಕೀಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು