Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:6 - ಕನ್ನಡ ಸತ್ಯವೇದವು J.V. (BSI)

6 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬೆಲಿಗೆ ಒಯ್ಯುವದಕ್ಕೋಸ್ಕರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ಪ್ರಾಂತ್ಯದ ಮೇಲೆ ಯುದ್ಧಕ್ಕೆ ಬಂದನು. ಯೆಹೋಯಾಕೀಮನನ್ನು ಸೆರೆಹಿಡಿದು ಅವನನ್ನು ಕಂಚಿನ ಸರಪಣಿಯಿಂದ ಕಟ್ಟಿಸಿದನು. ನಂತರ ಯೆಹೋಯಾಕೀಮನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:6
11 ತಿಳಿವುಗಳ ಹೋಲಿಕೆ  

ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ, ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಮೊದಲನೆಯ ವರುಷದಲ್ಲಿ ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು


ಜನಾಂಗಗಳು ಈ ವಾರ್ತೆಯನ್ನು ಕೇಳಿ ಅದಕ್ಕೆ ಗುಂಡಿತೋಡಲು ಅಲ್ಲಿ ಸಿಕ್ಕಿಬಿದ್ದಿತು; ಅದನ್ನು ಸರಪಣಿಗಳಿಂದ ಬಿಗಿದು ಐಗುಪ್ತದೇಶಕ್ಕೆ ಒಯ್ದವು.


ಇವನನ್ನು ಯೆರೂಸಲೇವಿುನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಟು ಮಣ್ಣುಪಾಲುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು