Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:5 - ಕನ್ನಡ ಸತ್ಯವೇದವು J.V. (BSI)

5 ಅವುಗಳ ಹಿಂಭಾಗವು ಒಳಗಡೆಗಿತ್ತು. ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಮೂರು ಸಾವಿರ ಬತ್ ನೀರನ್ನು ಹಿಡಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಡಲಿನ ಪಾತ್ರೆಯು ನಾಲ್ಕು ಬೆರಳಿನಷ್ಟು ದಪ್ಪವಾಗಿತ್ತು. ಅದರ ಅಂಚುಪಾತ್ರೆಯ ಅಂಚಿನ ಹಾಗೆಯೂ ಅರಳಿದ ಕಮಲಪುಷ್ಪದ ಹಾಗೆ ಇತ್ತು. ಅದರೊಳಗೆ ಮೂರು ಸಾವಿರ ಕೊಳಗ ನೀರು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಪಾತ್ರೆಯ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಅರವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ತಾಮ್ರದ ಎರಕದ ಪಾತ್ರೆಯು ಮೂರು ಇಂಚು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದರಲ್ಲಿ ಅರವತ್ತಾರು ಸಾವಿರ ಲೀಟರ್ ನೀರನ್ನು ತುಂಬ ಬಹುದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಅರವತ್ತಾರು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:5
4 ತಿಳಿವುಗಳ ಹೋಲಿಕೆ  

ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬತ್ ನೀರನ್ನು ಹಿಡಿಯುವದು.


ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.


ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರದಿಕ್ಕಿಗೂ ಮೂರು ಪಶ್ಚಿಮದಿಕ್ಕಿಗೂ ಮೂರು ದಕ್ಷಿಣದಿಕ್ಕಿಗೂ ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು; ಅವುಗಳ ಹಿಂಭಾಗವು ಒಳಗಡೆ ಇತ್ತು.


ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ ಮೂರು ಪಶ್ಚಿಮದಿಕ್ಕಿಗೂ ಮೂರು ದಕ್ಷಿಣ ದಿಕ್ಕಿಗೂ ಮೂರು ಪೂರ್ವದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು