Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 4:8 - ಕನ್ನಡ ಸತ್ಯವೇದವು J.V. (BSI)

8 ಹತ್ತು ಮೇಜುಗಳನ್ನು ಮಾಡಿಸಿ ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ ಎಡಗಡೆಯಲ್ಲಿ ಐದನ್ನೂ ಇಡಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹತ್ತು ಮೇಜುಗಳನ್ನು ಮಾಡಿಸಿ ದೇವಾಲಯದೊಳಗೆ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇಡಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಹತ್ತು ಮೇಜುಗಳನ್ನು ಮಾಡಿಸಿ ಅವುಗಳಲ್ಲಿ ಐದನ್ನು ದೇವಾಲಯದ ಬಲಗಡೆಯಲ್ಲಿಯೂ ಉಳಿದ ಐದನ್ನು ಎಡಗಡೆಯಲ್ಲಿಯೂ ಇರಿಸಿದನು. ಅನಂತರ ಸೊಲೊಮೋನನು ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬಟ್ಟಲುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 4:8
10 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ -


ನೀವು ಕರ್ತನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾರಿರಿ; ಕರ್ತನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟಮಾಡಲಾರಿರಿ.


ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.


ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ ನನ್ನ ಸೇವೆಮಾಡುವದಕ್ಕೆ ನನ್ನ ವೇದಿಯನ್ನು ಸಮೀಪಿಸಿ ನನ್ನ [ಆಲಯದ] ಪಾರುಪತ್ಯವನ್ನು ವಹಿಸುವರು.


ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.


ಅವನು ದೇವಾಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ - ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು