Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:1 - ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಮುಡುಪಾಗಿಟ್ಟ ಬೆಳ್ಳಿ ಬಂಗಾರವನ್ನೂ ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗೆ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ, ತನ್ನ ತಂದೆಯಾದ ದಾವೀದನು ಯೆಹೋವನಿಗೆ ಪ್ರತಿಷ್ಠೆ ಮಾಡಿದ್ದ ಬೆಳ್ಳಿಯನ್ನು, ಬಂಗಾರವನ್ನೂ, ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವದೇವರ ಆಲಯಕ್ಕೆ ಸೊಲೊಮೋನನು ಮಾಡಬೇಕಾಗಿದ್ದ ಕೆಲಸವೆಲ್ಲವೂ ಮುಗಿಯಿತು. ದಾವೀದನು ದೇವಾಲಯಕ್ಕಾಗಿ ಕೊಟ್ಟಿದ್ದ ವಸ್ತುಗಳನ್ನೆಲ್ಲಾ ಸೊಲೊಮೋನನು ತಂದಿರಿಸಿದನು; ಬೆಳ್ಳಿಬಂಗಾರಗಳಿಂದ ಮಾಡಿದ ಸಾಮಾನುಗಳನ್ನು ಸೊಲೊಮೋನನು ದೇವಾಲಯದ ಭಂಡಾರದ ಕೋಣೆಗಳಲ್ಲಿ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹೀಗೆಯೇ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ದೇವರ ಆಲಯದ ಭಂಡಾರಕ್ಕೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:1
7 ತಿಳಿವುಗಳ ಹೋಲಿಕೆ  

ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಮಾಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ ಲೆಕ್ಕವಿಲ್ಲದಷ್ಟು ತಾಮ್ರ ಕಬ್ಬಿಣ ಇವುಗಳನ್ನೂ ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ಅರಸನಾದ ದಾವೀದನು ಇವುಗಳನ್ನೂ ತನ್ನಿಂದ ಅಪಜಯಹೊಂದಿದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದಲೂ ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು ಮೋವಾಬ್ಯರು ಅಮ್ಮೋನಿಯರು ಫಿಲಿಷ್ಟಿಯರು ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


ಚೊಕ್ಕಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಗೆ, ದೇವಾಲಯದ ಮಹಾಪರಿಶುದ್ಧಸ್ಥಳದೊಳಗಣ ಬಾಗಲಿನ ಬಂಗಾರಕದಗಳು, ಪರಿಶುದ್ಧಸ್ಥಳದ ಬಂಗಾರ ಕದಗಳು ಇವೇ.


ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು