2 ಪೂರ್ವಕಾಲ ವೃತ್ತಾಂತ 5:12 - ಕನ್ನಡ ಸತ್ಯವೇದವು J.V. (BSI)12 ನಾರು ಬಟ್ಟೆಗಳನ್ನು ಧರಿಸಿಕೊಂಡು ತಾಳ ಸ್ವರಮಂಡಲ ಕಿನ್ನರಿ ಇವುಗಳನ್ನು ಹಿಡಿದುಕೊಂಡ ಲೇವಿಯ ಗಾಯಕರಾದ ಆಸಾಫ್‍ಹೇಮಾನ್ ಯೆದುತೂನರೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹಾಗೂ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರೂ ಇವರ ಮಕ್ಕಳೂ, ಸಹೋದರರೂ ನಾರುಮಡಿಗಳನ್ನು ಧರಿಸಿಕೊಂಡು, ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನು ನುಡಿಸುತ್ತಾ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರೂ ತುತ್ತೂರಿಗಳನ್ನು ಊದುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾರುಮಡಿಗಳನ್ನು ಧರಿಸಿಕೊಂಡು ತಾಳ, ಸ್ವರಮಂಡಲ, ಕಿನ್ನರಿ, ಇವುಗಳನ್ನು ಹಿಡಿದುಕೊಂಡು, ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರು ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಜ್ಞವೇದಿಕೆಯ ಪೂರ್ವ ಭಾಗದಲ್ಲಿ ಲೇವಿಯರ ಗಾಯಕರು ನಿಂತರು. ಆಸಾಫನ, ಹೇಮಾನನ ಮತ್ತು ಯೆದುತೂನನ ಗಾಯಕ ವೃಂದದವರೆಲ್ಲರೂ ಅಲ್ಲಿ ಇದ್ದರು. ಅವರ ಗಂಡುಮಕ್ಕಳೂ ಕುಟುಂಬದವರೂ ಅಲ್ಲಿದ್ದರು. ಗಾಯಕರೆಲ್ಲರೂ ಬಿಳೀ ನಾರುಮಡಿಯ ಬಟ್ಟೆಗಳನ್ನು ಉಟ್ಟಿದ್ದರು. ತಾಳ, ತಂತಿವಾದ್ಯಗಳನ್ನು ಹಿಡಿದುಕೊಂಡಿದ್ದರು. ಗಾಯಕರೊಂದಿಗೆ ನೂರಿಪ್ಪತ್ತು ಮಂದಿ ಯಾಜಕರು ತುತ್ತೂರಿಯನ್ನೂದಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.