Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:4 - ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿಬಂದಿರಲಾಗಿ ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿ ಬಂದಾಗ, ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರ ಹಿರಿಯರೆಲ್ಲರೂ ಕೂಡಿಬಂದಿರಲಾಗಿ ಲೇವಿಯರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲಿನ ಹಿರಿಯರೆಲ್ಲರೂ ಒಟ್ಟಾಗಿ ಸೇರಿಬಂದಾಗ ಲೇವಿಯರು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಜೆರುಸಲೇಮಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ, ಲೇವಿಯರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:4
8 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಎಲ್ಲಾ ಹಿರಿಯರು ಕೂಡಿಬಂದಿರಲಾಗಿ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.


ಮತ್ತು ಯಾಜಕರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಅವರ ಮುಂದಾಗಿ ಹೋದರು.


ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧಸ್ಥಳವೆನಿಸುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.


ಆ ಕಾಲದಲ್ಲಿ ದಾವೀದನು - ಲೇವಿಯರು ಹೊರತಾಗಿ ಯಾರೂ ದೇವಮಂಜೂಷವನ್ನು ಹೊರಬಾರದು; ಅದನ್ನು ಹೊರುವದಕ್ಕೂ ಸದಾಕಾಲ ತನ್ನ ಸೇವೆಮಾಡುವದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆಂದು ಹೇಳಿ


ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ - ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ; ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಯೆಹೋವನ ಮಂಜೂಷದ ಮುಂದೆ ನಡೆಯಲಿ ಅಂದನು.


ದಂಡು ಹೊರಡುವ ಕಾಲದಲ್ಲಿ ಆರೋನನೂ ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದನಂತರ ಕೆಹಾತ್ಯರು ಅವುಗಳನ್ನು ಹೊರುವದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು; ಮುಟ್ಟಿದರೆ ಸತ್ತಾರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಇದಲ್ಲದೆ ಯಾಜಕರಾದ ಲೇವಿಯರು ದೇವದರ್ಶನದ ಗುಡಾರ, ಅದರಲ್ಲಿದ್ದ ಎಲ್ಲಾ ಪರಿಶುದ್ಧವಸ್ತುಗಳು ಇವುಗಳನ್ನೂ ಹೊತ್ತುಕೊಂಡುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು