Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 5:7 - ಕನ್ನಡ ಸತ್ಯವೇದವು J.V. (BSI)

7 ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧಸ್ಥಳವೆನಿಸುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆಂದು ನೇಮಕವಾದ ಸ್ಥಳದಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಮೇಲೆ ಯಾಜಕರು ಒಡಂಬಡಿಕೆಯ ಪೆಟ್ಟಿಗೆಯನ್ನು ಅದಕ್ಕಾಗಿ ಮಾಡಿದ್ದ ಮಹಾಪರಿಶುದ್ಧ ಸ್ಥಳದ ಕೆರೂಬಿಗಳ ರೆಕ್ಕೆಗಳ ಕೆಳಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 5:7
13 ತಿಳಿವುಗಳ ಹೋಲಿಕೆ  

ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದಲ್ಲಿ ಸೇರೋಣವಾಗಲಿ.


ನಿಯಮದ ಪ್ರಕಾರ ಮಹಾಪರಿಶುದ್ಧಸ್ಥಳದ ಮುಂದೆ ಉರಿಯುತ್ತಿರುವದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು,


ಆದದರಿಂದ ನೀವು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ನಿಬಂಧನ ಮಂಜೂಷವನ್ನೂ ದೇವಾರಾಧನಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ ಎಂದು ಹೇಳಿದನು.


ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿಬಂದಿರಲಾಗಿ ಲೇವಿಯರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.


ಅರಸನಾದ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.


ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.


ಇದಲ್ಲದೆ ಇಸ್ರಾಯೇಲ್ಯರಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷವನ್ನು ಅಲ್ಲಿಟ್ಟಿದ್ದೇನೆ ಎಂದು ಹೇಳಿದನು.


ದ್ವಾರದ ಪಕ್ಕದ ಗೋಡೆಗಳ ಅಗಲ ಏಳೇಳು ಮೊಳ, ಗರ್ಭಗೃಹದ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ ಇದ್ದವು; ಆಗ ಅವನು ನನಗೆ - ಇದು ಮಹಾಪರಿಶುದ್ಧಸ್ಥಳವೆಂದು ಹೇಳಿದನು.


ಎಲ್ಲಾ ಇಸ್ರಾಯೇಲ್ಯರನ್ನು ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ - ದಾವೀದನ ಮಗನೂ ಇಸ್ರಾಯೇಲ್‍ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು