Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:10 - ಕನ್ನಡ ಸತ್ಯವೇದವು J.V. (BSI)

10 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕೂತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನದಾಗಿ ಈ ಆಲಯವನ್ನು ಕಟ್ಟಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದ್ದಾನೆ. ಆತನು ವಾಗ್ದಾನ ಮಾಡಿದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲಿನ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಾವು ಕೊಟ್ಟ ಮಾತನ್ನು ಸರ್ವೇಶ್ವರ ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದನ ಸ್ಥಾನದಲ್ಲಿ ಕುಳಿತುಕೊಂಡಿದ್ದೇನೆ. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ತಾನು ಕೊಟ್ಟ ಮಾತನ್ನು ಈಗ ನೆರವೇರಿಸಿದನು. ನಾನು ನನ್ನ ತಂದೆಯ ಸ್ಥಾನದಲ್ಲಿ ಅರಸನಾಗಿದ್ದೇನೆ. ದಾವೀದನು ನನ್ನ ತಂದೆ. ಈಗ ನಾನು ಇಸ್ರೇಲರ ರಾಜನು. ಇದು ದೇವರ ವಾಗ್ದಾನಕ್ಕನುಸಾರವಾಗಿದೆ. ನಾನು ಇಸ್ರೇಲರ ದೇವರಾದ ಯೆಹೋವನ ನಾಮಕ್ಕಾಗಿ ದೇವಾಲಯವನ್ನು ಕಟ್ಟಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ, ಯೆಹೋವ ದೇವರು ಮಾತುಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:10
12 ತಿಳಿವುಗಳ ಹೋಲಿಕೆ  

ಒಂದು ತಲಾಂತರವು ಗತಿಸುವದು, ಇನ್ನೊಂದು ತಲಾಂತರವು ಬರುವದು. ಭೂವಿುಯಾದರೋ ಶಾಶ್ವತವಾಗಿ ನಿಲ್ಲುವದು.


ದಾವೀದನ ಮಗನಾದ ಸೊಲೊಮೋನನು ತನ್ನ ದೇವರಾದ ಯೆಹೋವನಿಂದ ಸಹಾಯವನ್ನೂ ವಿಶೇಷವೃದ್ಧಿಯನ್ನೂ ಹೊಂದಿದವನಾಗಿ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡನು.


ಅಂದಿನಿಂದ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ ಯೆಹೋವನ ಸಿಂಹಾಸನದಲ್ಲಿ ಕೂತುಕೊಂಡು ವೃದ್ಧಿಯಾಗುತ್ತಾ ಬಂದನು. ಅರಸನಾದ ಸೊಲೊಮೋನನಿಗೆ ಇಸ್ರಾಯೇಲ್ಯರೆಲ್ಲರೂ ವಿಧೇಯರಾಗಿ ನಡೆಯುವವರಾದರು.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ ನಮ್ಮ ಪಿತೃಗಳೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ, ನಮ್ಮ ಆಯುಷ್ಕಾಲವು ನೆರಳಿನಂತಿದೆ; ನಮಗೆ ಯಾವ ನಿರೀಕ್ಷೆಯೂ ಇಲ್ಲ.


ನನಗೆ ದಯಪಾಲಿಸಿದ ಅನೇಕ ಮಂದಿ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್‍ಸಿಂಹಾಸನದ ಮೇಲೆ ಕುಳ್ಳಿರಿಸುವದಕ್ಕೋಸ್ಕರ ಆರಿಸಿಕೊಂಡನು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.


ಆದರೂ ನೀನು ಅದನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನು ಅದನ್ನು ನನ್ನ ಹೆಸರಿನದಾಗಿ ಕಟ್ಟಬೇಕು ಎಂದು ಹೇಳಿದನು.


ಇದಲ್ಲದೆ ಇಸ್ರಾಯೇಲ್ಯರಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷವನ್ನು ಅಲ್ಲಿಟ್ಟಿದ್ದೇನೆ ಎಂದು ಹೇಳಿದನು.


ನನ್ನ ಮಗನೇ, ನೀನು ಕೃತಾರ್ಥನಾಗುವಂತೆಯೂ ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು