Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:13 - ಕನ್ನಡ ಸತ್ಯವೇದವು J.V. (BSI)

13 ಅವನು ಐದು ಮೊಳ ಉದ್ದ, ಐದು ಮೊಳ ಅಗಲ, ಮೂರು ಮೊಳ ಎತ್ತರವಾಗಿರುವ ಒಂದು ತಾಮ್ರಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿಡಿಸಿದ್ದನು. ಅವನು ಇಸ್ರಾಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು 2:2 ಮೀಟರ್ ಉದ್ದ, 2:2 ಮೀಟರ್ ಅಗಲ, 1:3 ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿರಿಸಿದನು.ಇಸ್ರಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲಿನ ಸರ್ವಜನರ ಮುಂದೆ ಮೊಣಕಾಲೂರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:13
14 ತಿಳಿವುಗಳ ಹೋಲಿಕೆ  

ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರವಾಗಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು


ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬವರೂ ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬವರೂ ನಿಂತರು.


ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.


ಆಮೇಲೆ ದೇಹದಂಡನೆಮಾಡುವದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನಂದರೆ -


ಆ ದಿವಸಗಳನ್ನು ತೀರಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ಹೆಂಡರು ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಸಾಗಕಳುಹಿಸಿದರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆಮಾಡಿ


ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. ಆಗ ಅವರೆಲ್ಲರು ಬಹಳವಾಗಿ ಅತ್ತರು.


ಆಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸುಗೆಯಷ್ಟು ದೂರ ಹೋಗಿ


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.


ಇದಲ್ಲದೆ ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಹಾಪ್ರಾಕಾರಕ್ಕೆ ಬಾಗಲುಗಳನ್ನೂ ಮಾಡಿಸಿದನು; ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಿದನು.


ಒಳಗಣ ಪ್ರಾಕಾರವೆನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರುವಿನ ಮರದ ಕಂಬಗಳೂ ಇದ್ದವು.


ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.


ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲ್ಯರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ಕೈಗಳನ್ನೆತ್ತಿಕೊಂಡು ನಿಂತನು.


ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ.


ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು