2 ಪೂರ್ವಕಾಲ ವೃತ್ತಾಂತ 6:14 - ಕನ್ನಡ ಸತ್ಯವೇದವು J.V. (BSI)14 ಇಸ್ರಾಯೇಲ್‍ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗೆ ಪ್ರಾರ್ಥಿಸಿದನು, “ಇಸ್ರಾಯೇಲರ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರು ಯಾರೂ ಇಲ್ಲ; ಪೂರ್ಣಮನಸ್ಸಿನಿಂದ ನಿನಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನು ನೆರವೇರಿಸಿ ದಯೆಯನ್ನೂ, ಕೃಪೆಯನ್ನೂ ತೋರಿಸಬಲ್ಲ ದೇವರು ಒಬ್ಬರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆ ಪ್ರಾರ್ಥಿಸಿದನು. “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಆಕಾಶದಲ್ಲಾದರೂ, ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸಿದ್ದೀರಿ. ಅಧ್ಯಾಯವನ್ನು ನೋಡಿ |