Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:18 - ಕನ್ನಡ ಸತ್ಯವೇದವು J.V. (BSI)

18 ದೇವರು ನಿಜವಾಗಿ ಮನುಷ್ಯರೊಡನೆ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ದೇವರು ನಿಜವಾಗಿ ಮನಷ್ಯರೊಡನೆ ಭೂಲೋಕದಲ್ಲಿ ವಾಸವಾಗಿರುವನೋ? ಸ್ವರ್ಗವೂ, ಸ್ವರ್ಗಾಧಿ ಸ್ವರ್ಗವೂ ನಿನ್ನ ವಾಸಕ್ಕೆ ಸಾಲವು, ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಆಲಯವು ನಿನಗೆ ಹೇಗೆ ಸಾಕಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶಮಂಡಲವಾಗಲಿ ಅತ್ಯುನ್ನತವಾದ ಆಕಾಶವಾಗಲಿ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವರೋ? ಇಗೋ, ಆಕಾಶವೂ, ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:18
21 ತಿಳಿವುಗಳ ಹೋಲಿಕೆ  

ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಲ್ಲಿ ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ನಾನು ಆತನ ಸನ್ನಿಧಿಯಲ್ಲಿ ಧೂಪಹಾಕುವ ಉದ್ದೇಶದಿಂದ ಹೊರತು ಆತನ ವಾಸಕ್ಕಾಗಿ ಆಲಯವನ್ನು ಕಟ್ಟಿಸುವದಕ್ಕೆ ಎಷ್ಟರವನು!


ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೆಯ ಆಕಾಶದ ಪರಿಯಂತರಕ್ಕೂ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆ, ದೇವರೇ ಬಲ್ಲನು.


ಜಗತ್ತನ್ನೂ ಅದರಲ್ಲಿರುವ ಎಲ್ಲಾ ವಸ್ತುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;


ನೀವು ಹಿಜ್ಕೀಯನಿಂದ ಮರುಳಾಗಿ ಈ ಪ್ರಕಾರ ಮೋಸಹೋಗಬೇಡಿರಿ. ಅವನನ್ನು ನಂಬಲೂಬೇಡಿರಿ. ಯಾವ ರಾಜ್ಯ ಜನಾಂಗಗಳ ದೇವತೆಯಾದರೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ ಎಂದು ಹೇಳಿಸಿದನು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.


ನಾನಾದರೋ ದೇವರೊಂದಿಗೆ ವಾದಿಸಿ ಆತನಿಗೆ ಉತ್ತರಕೊಡುವದಕ್ಕೆ ಮತ್ತೂ ಅಶಕ್ತನು.


ದೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನಿಂದಾದ [ಶರೀರಗಳೆಂಬ] ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪುಕಂಡುಹಿಡಿಯಬೇಕಲ್ಲವೇ. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.


ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು!


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.


ಆದರೆ ಇಲ್ಲಿ ದೇವಾಲಯಕ್ಕಿಂತ ಹೆಚ್ಚಿನವನು ಇದ್ದಾನೆಂದು ನಿಮಗೆ ಹೇಳುತ್ತೇನೆ. ನನಗೆ ಯಜ್ಞವು ಬೇಡ,


ಇಸ್ರಾಯೇಲ್ ದೇವರೇ, ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ.


ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡು; ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.


ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು; ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು