2 ಪೂರ್ವಕಾಲ ವೃತ್ತಾಂತ 6:21 - ಕನ್ನಡ ಸತ್ಯವೇದವು J.V. (BSI)21 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ, ನೀನು ನಿನ್ನ ಸೇವಕನ ಹಾಗೂ ನಿನ್ನ ಪ್ರಜೆಗಳಾದ ಇಸ್ರಾಯೇಲರ ವಿಜ್ಞಾಪನೆಯನ್ನು ಲಾಲಿಸು. ಅವರು ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ವಿಜ್ಞಾಪನೆಯನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸುವಾಗ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿನ್ನ ಜನರಾದ ಇಸ್ರೇಲರು ಮತ್ತು ನಾನು ಮಾಡುವ ಪ್ರಾರ್ಥನೆಯನ್ನು ಆಲೈಸು. ನಾವು ಈ ದೇವಾಲಯದ ಕಡೆಗೆ ತಿರುಗಿಕೊಂಡು ನಿನಗೆ ಪ್ರಾರ್ಥಿಸುವಾಗ ನಿನ್ನ ನಿವಾಸವಾದ ಪರಲೋಕದಿಂದ ನಮ್ಮ ಪ್ರಾರ್ಥನೆಯನ್ನು ಆಲೈಸು; ನಮ್ಮ ಪಾಪಗಳನ್ನು ಕ್ಷಮಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ನೀವು ನಿಮ್ಮ ಸೇವಕನ ಮತ್ತು ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ. ಅಧ್ಯಾಯವನ್ನು ನೋಡಿ |