Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:24 - ಕನ್ನಡ ಸತ್ಯವೇದವು J.V. (BSI)

24 ತಮ್ಮ ಪಾಪಗಳ ಸಲುವಾಗಿ ಶತ್ರುಗಳಿಂದ ಕುಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರು ತಿರುಗಿಕೊಂಡು ನಿನ್ನ ನಾಮವನ್ನು ಎತ್ತಿ ಈ ಆಲಯಕ್ಕೆ ಬಂದು ನಿನ್ನ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ಹಿಂದಿರುಗಿ ನಿನ್ನ ಆಲಯಕ್ಕೆ ಬಂದು ನಿನ್ನ ಹೆಸರನ್ನು ಸ್ತುತಿಸಿ, ನಿನ್ನ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನು ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ತಮ್ಮ ಪಾಪಗಳ ನಿಮಿತ್ತ ಶತ್ರುಗಳ ಮುಂದೆ ತಲೆತಗ್ಗಿಸಬೇಕಾಗುವ ನಿಮ್ಮ ಪ್ರಜೆಗಳಾದ ಇಸ್ರಯೇಲರು ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಎತ್ತಿ, ಈ ಆಲಯಕ್ಕೆ ಬಂದು, ನಿಮ್ಮ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ವೈರಿಗಳು ಬಂದು ಅವರನ್ನು ಯುದ್ಧದಲ್ಲಿ ಸೋಲಿಸಿದರೂ ನಿನ್ನ ಜನರು ನಿನ್ನ ಕಡೆಗೆ ತಿರುಗಿ ತಮ್ಮ ಪಾಪಗಳನ್ನು ಒಪ್ಪಿಕೊಂಡು ಈ ದೇವಾಲಯಕ್ಕೆ ಬಂದು ನಿನ್ನ ಹೆಸರನ್ನು ಹೇಳಿಕೊಂಡು ನಿನಗೆ ಪ್ರಾರ್ಥಿಸಿ ಬೇಡಿಕೊಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯಕ್ಕೆ ಬಂದು, ನಿಮ್ಮ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:24
23 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದ್ದೀ; ವೈರಿಗಳು ನಮ್ಮ ಸೊತ್ತನ್ನು ಬೇಕಾದ ಹಾಗೆ ಸೂರೆಮಾಡುತ್ತಾರೆ.


ಈ ಇಸ್ರಾಯೇಲ್ಯರು ಬಾಳನ ಪ್ರತಿಮೆಗಳನ್ನು ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಿದ್ದಾರಲ್ಲಾ. ಇನ್ನೇನು ಹೇಳಲಿ?


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಯಾರೂ ಓಡಿಸದಿದ್ದರೂ ಕತ್ತಿಯ ಎದುರಿನಿಂದ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಎದುರಿನಲ್ಲಿ ನಿಲ್ಲಲಾರದವರಾಗುವಿರಿ.


ನೀನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರಿಗೂ ಅವರ ಪಿತೃಗಳಿಗೂ ನೀನು ಕೊಟ್ಟ ದೇಶಕ್ಕೆ ಅವರನ್ನು ತಿರಿಗಿ ಬರಮಾಡು.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು