2 ಪೂರ್ವಕಾಲ ವೃತ್ತಾಂತ 6:41 - ಕನ್ನಡ ಸತ್ಯವೇದವು J.V. (BSI)41 ದೇವರಾದ ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದೊಳಗೆ ಸೇರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 “ದೇವರಾದ ಯೆಹೋವನೇ, ಎದ್ದು ನಿನ್ನ ಸಾಮರ್ಥ್ಯವನ್ನು ತೋರಿಸುವ ಒಡಂಬಡಿಕೆಯ ಪೆಟ್ಟಿಗೆಯೊಡನೆ ನಿನ್ನ ವಾಸಸ್ಥಳಕ್ಕೆ ಬಾ. ನಿನ್ನ ಯಾಜಕರು ರಕ್ಷಣಾವಸ್ತ್ರವನ್ನು ಧರಿಸಿಕೊಂಡಿರಲಿ; ನಿನ್ನನ್ನು ಪ್ರೀತಿಸುವವರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 “ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ. ಅಧ್ಯಾಯವನ್ನು ನೋಡಿ |