2 ಪೂರ್ವಕಾಲ ವೃತ್ತಾಂತ 6:5 - ಕನ್ನಡ ಸತ್ಯವೇದವು J.V. (BSI)5 ಆತನು - ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ನಾನು ಬರಮಾಡಿದ್ದು ಮೊದಲುಗೊಂಡು ಇಸ್ರಾಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ನನ್ನ ನಾಮದ ನಿವಾಸಕ್ಕೋಸ್ಕರ ಆಲಯಸ್ಥಾನವನ್ನಾಗಿ ಆರಿಸಿಕೊಂಡಿರಲಿಲ್ಲ; ನನ್ನ ಪ್ರಜೆಯಾದ ಇಸ್ರಾಯೇಲ್ಯರ ಪ್ರಭುವಾಗುವದಕ್ಕಾಗಿ ಯಾವನೊಬ್ಬ ಪುರುಷನನ್ನು ಆರಿಸಿಕೊಂಡದ್ದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ‘ಈಜಿಪ್ಟಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |
ತಾನು ಮಾಡಿಸಿದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರವಿಧಿ ನ್ಯಾಯಗಳನ್ನು ಅನುಸರಿಸಿ ನಡೆಯುವದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳೊಳಗೆ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು;