2 ಪೂರ್ವಕಾಲ ವೃತ್ತಾಂತ 6:6 - ಕನ್ನಡ ಸತ್ಯವೇದವು J.V. (BSI)6 ಆದರೆ ಈಗ ನನ್ನ ನಾಮಸ್ಥಾಪನೆಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.