Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ - ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ ಈ ಮನೆಯನ್ನು ನನ್ನ ಯಜ್ಞಾಲಯಕ್ಕಾಗಿ ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಳಿಕ ಸರ್ವೇಶ್ವರ ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷರಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಆಲಿಸಿ, ಈ ಮನೆಯನ್ನು ಬಲಿಯರ್ಪಣಾ ಮಂದಿರಕ್ಕಾಗಿ ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಬಳಿಕ ಯೆಹೋವನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿಕೊಂಡು, “ಸೊಲೊಮೋನನೇ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ. ನಾನು ಈ ಆಲಯವನ್ನು ಯಜ್ಞಾಲಯಕ್ಕಾಗಿ ಆರಿಸಿಕೊಂಡಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:12
17 ತಿಳಿವುಗಳ ಹೋಲಿಕೆ  

ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು - ನಿನಗೆ ಯಾವ ವರ ಬೇಕು, ಕೇಳಿಕೋ ಎಂದು ಹೇಳಲು ಸೊಲೊಮೋನನು ಆತನಿಗೆ -


ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ನನ್ನ ನಾಮಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲೇ ಇರುವವು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ ಬೆಳೆಯ ದಶಮಾಂಶಗಳನ್ನೂ ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ


ಕೊರ್ನೇಲ್ಯನೇ, ನಿನ್ನ ಪ್ರಾರ್ಥನೆಯು ಕೇಳಿಬಂತು, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.


ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದೀ; ಅವರ ಹೃದಯವನ್ನು ಧೈರ್ಯಪಡಿಸುತ್ತೀ; ಅವರ ಮೊರೆಗೆ ಕಿವಿಗೊಡುತ್ತೀ.


ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.


ಎಲೀಯನು ತಿರಿಗಿ ಅವನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಎಂದು ಹೇಳಿದನು. ಆಗ ಅವನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಉತ್ತರಕೊಟ್ಟನು; ಆದದರಿಂದ ಇಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.


ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ


ಆಗ ಯೆಹೂದದ ಮತ್ತು ಯೆರೂಸಲೇವಿುನ ನೈವೇದ್ಯವು ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾಗಿದ್ದಂತೆ ಆಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು