Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:13 - ಕನ್ನಡ ಸತ್ಯವೇದವು J.V. (BSI)

13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ ದೇಶವನ್ನು ತಿಂದುಬಿಡುವದಕ್ಕೆ ವಿುಡಿತೆಗಳನ್ನು ಕಳುಹಿಸುವಾಗಲೂ ನನ್ನ ಪ್ರಜೆಯ ಮೇಲೆ ಘೋರ ವ್ಯಾಧಿಯನ್ನು ಬರಮಾಡುವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲು, ನಾಡನ್ನು ನಾಶಮಾಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲು ಹಾಗೂ ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಮಿಡತೆಗಳಿಗೆ ದೇಶವನ್ನು ಹಾಳುಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:13
17 ತಿಳಿವುಗಳ ಹೋಲಿಕೆ  

ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂವಿುಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.


ಇವರಿಗೆ ಯಾವನಾದರೂ ಕೇಡನ್ನು ಉಂಟುಮಾಡಬೇಕೆಂದಿದ್ದರೆ ಅವನಿಗೆ ಈ ರೀತಿಯಾಗಿ ಕೊಲೆಯಾಗಬೇಕು. ತಾವು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂವಿುಯನ್ನು ಪೀಡಿಸುವದಕ್ಕೂ ಅಧಿಕಾರವುಂಟು.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಗುಂಪುವಿುಡತೆ, ಸಣ್ಣವಿುಡತೆ, ದೊಡ್ಡವಿುಡತೆ, ಚೂರಿವಿುಡತೆ, ಅಂತು ನಾನು ನಿಮ್ಮ ಮೇಲೆ ಕಳುಹಿಸಿದ ನನ್ನ ದೊಡ್ಡ ದಂಡು ತಿಂದುಬಿಟ್ಟ ವರುಷಗಳನ್ನು ನಾನು ನಿಮಗೆ ಕಟ್ಟಿಕೊಡುವೆನು.


ಇಗೋ, ಯಾರೂ ಕಟ್ಟದಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲ್ ಜನರಲ್ಲಿ ಎಷ್ಟೋ ಮಂದಿ ವಿಧವೆಯರು ಇದ್ದದ್ದು ನಿಜ;


ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.


ಆತನು ಆಜ್ಞಾಪಿಸಲು ವಿುಡಿತೆಗಳೂ ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು


ಆತನು ಹಾದುಹೋದರೂ ಸೆರೆಯಲ್ಲಿಟ್ಟರೂ ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?


ಆಗಲಿ, ನಾನು ಇವರಿಗೆ ವ್ಯಾಧಿಯನ್ನುಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು ಎಂದು ಹೇಳಿದನು.


ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ ನಿಮಗೆ ಮಳೆಯನ್ನು ತಡೆದೆನು; ಒಂದು ಊರಿನ ಮೇಲೆ ಮಳೆಯಾಗುವಂತೆಯೂ ಇನ್ನೊಂದು ಊರಿನ ಮೇಲೆ ಮಳೆಯಾಗದಂತೆಯೂ ಮಾಡಿದೆನು; ಒಬ್ಬನ ಹೊಲದಲ್ಲಿ ಮಳೆಯಾಯಿತು, ಮಳೆಯಾಗದ ಹೊಲವು ಬಾಡಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು