Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:17 - ಕನ್ನಡ ಸತ್ಯವೇದವು J.V. (BSI)

17 ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನನಗೆ ವಿಧೇಯನಾಗಿ ನಡೆದುಕೊಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೊಲೊಮೋನನೇ, ನಿನ್ನ ತಂದೆಯಾದ ದಾವೀದನು ಹೇಗೆ ಜೀವಿಸಿದನೋ ಅದೇ ಪ್ರಕಾರ ನೀನು ನನ್ನೆದುರಿನಲ್ಲಿ ಜೀವಿಸಿ, ನನ್ನ ಅಪ್ಪಣೆಗಳನ್ನು ಕೈಕೊಂಡು, ನನ್ನ ವಿಧಿನಿಯಮಗಳಿಗೆ ವಿಧೇಯನಾಗುವದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನೀನು ನಿನ್ನ ತಂದೆಯಾದ ದಾವೀದನಂತೆ, ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:17
17 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಾಯೇಲ್‍ರಾಜ್ಯವು ನಿನ್ನ ಪಾಲಾಗುವದು.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ಅವರು ತನ್ನ ವಿಧಿಗಳನ್ನು ಕೈಕೊಂಡು ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬದೇ ಆತನ ಉದ್ದೇಶ. ಯಾಹುವಿಗೆ ಸ್ತೋತ್ರ!


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಇಸ್ರಾಯೇಲ್‍ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ - ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವದಾದರೆ ಅವರು ತಪ್ಪದೆ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವೆನು ಎಂಬದಾಗಿ ವಾಗ್ದಾನ ಮಾಡಿದಿಯಲ್ಲಾ; ಅದನ್ನು ನೆರವೇರಿಸು.


ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು ಅಂದನು.


ನಿನ್ನ ದೇವರಾದ ಯೆಹೋವನ ಕಟ್ಟಳೆಯನ್ನು ಕೈಕೊಂಡು ಆತನ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮ ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವದಾದರೆ ನೀನು ಯಾವದನ್ನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವಿ.


ನನ್ನ ನಾಮಮಹತ್ತು ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲೇ ಇರುವವು.


ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಮತ್ತು ಇಸ್ರಾಯೇಲ್ಯರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡಿಸುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದರಲ್ಲಿ ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇದು!


ಇಸ್ರಾಯೇಲ್‍ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ - ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನಡೆದುಕೊಳ್ಳುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವೆನು ಎಂಬದಾಗಿ ವಾಗ್ದಾನಮಾಡಿದಿಯಲ್ಲಾ, ಅದನ್ನು ನೆರವೇರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು