Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:20 - ಕನ್ನಡ ಸತ್ಯವೇದವು J.V. (BSI)

20 ಅವುಗಳಿಗೆ ಕೈಮುಗಿಯುವದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಕಿತ್ತುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಟ್ಟು ಎಲ್ಲಾ ಜನಾಂಗಗಳವರು ಗಾದೆಗಳನ್ನು ಕಲ್ಪಿಸುವದಕ್ಕೂ ನಿಂದಿಸುವದಕ್ಕೂ ಅದು ಆಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:20
21 ತಿಳಿವುಗಳ ಹೋಲಿಕೆ  

ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು.


ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಯೆಹೋವನ ಈ ವಾಕ್ಯವನ್ನು ಕೇಳು - ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.


ಇಸ್ರಾಯೇಲ್ಯರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದುಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಾಯೇಲ್ಯರು ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ ಆಸ್ಪದರಾಗುವರು.


ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದ ಮಾಡಿದ್ದೀ; ಅವರು ನಮ್ಮನ್ನು ನೋಡಿ ತಲೆ ಆಡಿಸುತ್ತಾರೆ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ರಾಜ್ಯವನ್ನಾಗಲಿ ಕಿತ್ತು ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ


ಆದರೆ ಯಾವ ಜನಾಂಗವು ಕೇಳುವದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶಮಾಡುವೆನು ಎಂಬದು ಯೆಹೋವನ ನುಡಿ.


ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿ ಬಿಡುವನು; ನಿನ್ನನ್ನು ಹಿಡಿದು ನಿವಾಸದೊಳಗಿಂದ ಕಿತ್ತುಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. ಸೆಲಾ.


ನೀವು ಆತನನ್ನು ಹಿಂಬಾಲಿಸದೆ ನಡೆಯುವ ಕಾರಣ ಆತನು ಈ ಜನರನ್ನು ಅರಣ್ಯದಲ್ಲಿ ಇನ್ನೂ ಇರಿಸಿದರೆ ಈ ಸಮಸ್ತಜನಾಂಗದ ನಾಶಕ್ಕೆ ನೀವೇ ಕಾರಣರಾಗುವಿರಿ ಎಂದು ಹೇಳಿದನು.


ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.


ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ - ಯೆಹೋವನು ಈ ಮಹಾ ಪಟ್ಟಣಕ್ಕೆ ಹೀಗೆ ಏಕೆ ಮಾಡಿದ ಎಂದು ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ -


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ಹೀಗಿರಲು ನಾನು ಅತಿದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವವು.


[ಅವನ ಜನರು] ಯೆರೂಸಲೇವಿುನ ಪೌಳಿಗೋಡೆಗಳನ್ನು ಕೆಡವಿ ಅವರ ಎಲ್ಲಾ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟುಬಿಟ್ಟು ಅಮೂಲ್ಯ ವಸ್ತುಗಳನ್ನು ನಾಶಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು